Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಹಿಜಬ್- ಕೇಸರಿ ಗಲಾಟೆ ಜೋರಾಗುತ್ತಿದ್ದಂತೆ ಸರ್ಕಾರ ಮೂರು ದಿನ ಶಾಲಾ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ.
ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ ಎಂದು ಹೇಳಿದ್ದಾರೆ.