ನವದೆಹಲಿ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ತೀರಾ ಬಿಗಡಾಯಿಸಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಮೂತ್ರ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಸ್ಥಿತಿ ಮತ್ತಷ್ಟಿ ಬಿಗಡಾಯಿಸಿದ್ದು ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಅವರ ಆರೋಗ್ಯ ಸ್ಥಿತಿ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹಿತ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.