Publish Date: Fri, 17 Aug 2018 (09:30 IST)
Updated Date: Fri, 17 Aug 2018 (09:33 IST)
ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಕ್ರಿಯೆಗಳು ಇಂದು ದೆಹಲಿಯ ರಾಜ್ ಘಾಟ್ ಬಳಿ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಾಜಪೇಯಿ ಅಂತಿಮ ಸಂಸ್ಕಾರಗಳು ನಡೆಯಲಿವೆ. ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಪತಿ ಅವರ ಅಂತ್ಯಕ್ರಿಯೆಗಳನ್ನು ನೆರವೇರಿಸಲಿದ್ದಾರೆ. ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ಆಗಲಿದೆ.
ಈಗಾಗಲೇ ವಾಜಪೇಯಿ ಪಾರ್ಥಿವ ಶರೀರವನ್ನು ಅವರ ಕೃಷ್ಣಮೆನನ್ ರಸ್ತೆ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ. ಪಂಡಿತ್ ದೀನದಯಾಳ್ ರಸ್ತೆ ಮಾರ್ಗವಾಗಿ ಬಿಜೆಪಿ ಕಚೇರಿಗೆ ಅಂತಿಮ ಯಾತ್ರೆ ನಡೆಸಿ ಮಧ್ಯಾಹ್ನ 1 ಗಂಟೆಯವರೆಗೂ ಇಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಗಣ್ಯಾತಿ ಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಕರ್ನಾಟಕದಿಂದ ಸಿಎಂ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ ಇನ್ನು ಕೆಲವೇ ಕ್ಷಣಗಳಲ್ಲಿ ದೆಹಲಿ ತಲುಪಿ ವಾಜಪೇಯಿ ಅಂತಿಮ ದರ್ಶನ ಪಡೆಯಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.