ಜಕಾರ್ತ : ವಿವಾಹಪೂರ್ವ ಸೆಕ್ಸ್ ತಡೆಯಲು ಇಂಡೋನೇಷ್ಯಾ ಸರ್ಕಾರ ಹೊಸ ಕ್ರಿಮಿನಲ್ ಕಾನೂನು ಜಾರಿಗೆ ತರಲು ಸಜ್ಜಾಗಿದೆ. ಅದಕ್ಕಾಗಿ ಕರಡನ್ನೂ ಸಿದ್ಧಪಡಿಸಿದೆ.
ಹೊಸ ಕ್ರಿಮಿನಲ್ ಕಾನೂನು ಪ್ರಕಾರ ವಿವಾಹ ಪೂರ್ವ ಸೆಕ್ಸ್ ಮಾಡಿದ್ರೆ ಅಂತಹವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು ಎಂದು ಸರ್ಕಾರ ಹೇಳಿದೆ.
ಇಂಡೋನೇಷ್ಯಾ ತನ್ನ ದೇಶದ ಮೌಲ್ಯಗಳಿಗೆ ತಕ್ಕಂತೆ ಕ್ರಿಮಿನಲ್ ಕಾನೂನು ರೂಪಿಸಿರುವುದು ನಮ್ಮ ಹೆಮ್ಮೆ. ಮುಂದಿನ ಸಂಸತ್ತಿನಲ್ಲಿ ಹೊಸ ಶಾಸನವಾಗಿ ಈ ಕ್ರಿಮಿನಲ್ ಕೋಡ್ ಅಂಗೀಕಾರವಾಗುವ ನಿರೀಕ್ಷೆಯಿದೆ ಎಂದು ಉಪ ಕಾನೂನು ಮಂತ್ರಿ ಎಡ್ವರ್ಡ್ ಒಮರ್ ಷರೀಫ್ ಹೇಳಿದ್ದಾರೆ.
ಈ ಕಾನೂನು ವಿಶ್ವದ ಮುಸ್ಲಿಂ ಬಹುಸಂಖ್ಯಾತ ದೇಶದ ಜನರ ಮೇಲೆ ಪರಿಣಾಮ ಬೀರಬಹುದು. ದಂಪತಿ ವಿವಾಹಪೂರ್ವವಾಗಿ ಅಕ್ರಮ ಸಂಬಂಧ ಹೊಂದಿದ್ದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.