ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿ ವಾತಾವರಣ ಇರಲಿದೆ.
ಬೆಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನ ತಾಪಮಾನ 17.6 ಡಿಗ್ರಿಗೆ ಕುಸಿದಿದ್ದು, ಕಳೆದ 12 ವರ್ಷದಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಆಗಿದೆ.