ಬೆಂಗಳೂರಿಗರೇ ಗಮನಿಸಿ, ಪೀಣ್ಯ ಸಂಚಾರ ಬಂದ್!

Webdunia
ಭಾನುವಾರ, 26 ಡಿಸೆಂಬರ್ 2021 (09:01 IST)
ನೆಲಮಂಗಲ : ಬೆಂಗಳೂರು- ತುಮಕೂರು ರಸ್ತೆಯನ್ನು ಸಂಪರ್ಕಿಸುವ ನವಯುಗ ಮೇಲ್ಸೇತುವೆಯಲ್ಲಿ ಬಿರುಕು ಮೂಡಿದ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಲಾಗಿದೆ.

ಟಿ.ದಾಸರಹಳ್ಳಿಯ ಬಳಿಯ ದೀಪಕ್ ಬಸ್ ನಿಲ್ದಾಣದ ಬಳಿ ಮೇಲ್ಸೇತುವೆ ಬಿರುಕು ಮೂಡಿದ ಪರಿಣಾಮ ಕಿಲೋಮಿಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣು ಆಗಿದ್ದಾರೆ.  ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವನ್ನು ಹೇರಿದ್ದು, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. 

ಸರ್ವಿಸ್ ರಸ್ತೆಯಲ್ಲೂ ವಿಪರೀತ ಟ್ರಾಫಿಕ್ ಜಾಮ್ ಆದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುವವರು ಮಾದವಾರ ಬಳಿ ಬಲ ತಿರುವು ಪಡೆದು ನೈಸ್ ರಸ್ತೆ ಮೂಲಕ ನಗರ ಪ್ರವೇಶಕ್ಕೆ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಿಂದ ತುಮಕೂರು ಕಡೆ ಹೋಗುವವರು, ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ಬಳಿ ಎಡ ತಿರುವು ಪಡೆದು ಸುಮನಹಳ್ಳಿ, ಮಾಗಡಿ ರಸ್ತೆ ಮೂಲಕ ನೈಸ್ ರಸ್ತೆಯಿಂದ ಹೊರ ಹೋಗಲು ಸೂಚಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments