Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯೋತ್ಸವ ಆಚರಣೆಗೆ ನಿಯಮಗಳೇನು ?

ರಾಜ್ಯೋತ್ಸವ ಆಚರಣೆಗೆ ನಿಯಮಗಳೇನು ?
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (13:48 IST)
ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಂದ ಶಿಫಾರಸು ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವಕ್ಕೆ ನಿಯಮಾವಳಿ ಸೂಚಿಸಲಾಗಿದೆ.
ಹೊರಾಂಗಣ ಕಾರ್ಯಕ್ರಮಗಳಲ್ಲಿ ಜನ ಸೇರ್ಪಡೆಗೆ ನಿರ್ಬಂಧ ವಿಧಿಸಿ ಸೂಚನೆ ಕೊಡಲಾಗಿದೆ. 500ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ಕಾರ್ಯಕ್ರಮಕ್ಕೆ ಬರುವವರಿಗೆ 2 ಡೋಸ್ ಲಸಿಕೆ ಆಗಿರಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು. ಎಲ್ಲರೂ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು ಮಾಡಲಾಗಿದೆ.
ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿರೋ ಅಂಶಗಳೇನು ?
* ಹೊರಾಂಗಣ ಕಾರ್ಯಕ್ರಮಗಳಲ್ಲಿ 500 ಜನಕ್ಕೂ ಹೆಚ್ಚು ಸೇರುವಂತಿಲ್ಲ
*  ಕಾರ್ಯಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಅದರ ಸರ್ಟಿಫಿಕೇಟ್ ಇರಬೇಕು
* ಥರ್ಮಲ್ ಸ್ಕ್ರೀನಿಂಗ್ ಆಗಬೇಕು. ಲಕ್ಷಣ ರಹಿತ ವ್ಯಕ್ತಿಗಳಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಡಬೇಕು
* ಮಾಸ್ಕ್ ಕಡ್ಡಾಯವಾಗಿ ಹಾಕಬೇಕು
* ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು
* ಒಂದು ಮೀಟರ್ ಅಷ್ಟು ದೂರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
* ಕಾರ್ಯಕ್ರಮದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲೇಬೇಕು


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ರಾಜ್ಯೋತ್ಸವ ಸಂಭ್ರಮ; ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ