ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ.
ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 64 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಹಾಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಠಿಣ ನಿಯಮ ಜಾರಿಗೆ ಮುಂದಾಗಿದ್ದಾರೆ.
ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಂತೆ ಇಂದು ಉನ್ನತ ಮಟ್ಟದ ಸಭೆ ಕರೆದ ಕೇಜ್ರಿವಾಲ್, ಓಮಿಕ್ರಾನ್ ತಡೆಗೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಪ್ರತಿದಿನ 3 ಲಕ್ಷಕ್ಕೂ ಮೇಲ್ಪಟ್ಟು ಕೊರೊನಾ ಟೆಸ್ಟ್ ನಡೆಸಲು ಸೂಚಿಸಿದ್ದಾರೆ.
ದೆಹಲಿಯಲ್ಲಿ ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ, ಕ್ರೀಡೆ, ಸಭೆ ಸಮಾರಂಭ, ಹಬ್ಬ ಆಚರಣೆಗೆ ನಿಷೇಧ ಹೇರಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಶೇ.50 ರಷ್ಟು ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಮದುವೆ ಸಹಿತ ಇತರ ಕಾರ್ಯಕ್ರಮಗಳಿಗೆ ಗರಿಷ್ಠ 200 ಜನರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.