ಹಾಸನ : ಹೊಳೆನರಸಿಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡರು ಆರ್.ಟಿ.ಓ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಮೊಮ್ಮಗ ಜೆಡಿಎಸ್ ನ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು,’ ಕ್ಷೇತ್ರದಲ್ಲಿ ಆರ್ ಟಿಓ ಕಚೇರಿಯ ಸಿಬ್ಬಂದಿ ಸೀಜ್ ಮಾಡುವ ನೆಪದಲ್ಲಿ ಪಡೆದ ಹಣವನ್ನು ವಾಹನಗಳಿಗೆ ಪೊಲೀಸ್ ಸ್ಟಿಕ್ಕರ್ ಬಳಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
ಅಲ್ಲದೇ ಕ್ಷೇತ್ರದ ವ್ಯಾಪ್ತಿಯ ಗಾರ್ಮೆಂಟ್ಸ್ ಕಾರ್ಯನಿರ್ವಹಿಸುವ ಮಹಿಳೆಯರಿಗೂ ಹಣದ ಆಮಿಷ ಒಡ್ಡಲಾಗುತ್ತಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳ ಚಾಲಕರಿಗೆ ಬೆದರಿಕೆ ಒಡ್ಡಿರುವ ಕಾಂಗ್ರೆಸ್ ಪಕ್ಷದವರು ಹಣ ಮತ್ತು ಉಡುಗೊರೆಗಳನ್ನು ಹಂಚುತ್ತಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ