ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ನಾಳೆಯಿಂದ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರಲಿದೆ. ಆದರೆ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಜತೆಗೆ ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ?
ಈ ಪ್ರಶ್ನೆಗೆ ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ತೀರ್ಮಾನವಾಗಲಿದೆ. ಕೆಲವು ಮೂಲಗಳ ಪ್ರಕಾರಣ ದಲಿತ ಮುಖಂಡ ಜಿ ಪರಮೇಶ್ವರ್ ಜತೆಗೆ ಲಿಂಗಾಯತ ಸಮುದಾಯದ ಪ್ರಬಲ ನಾಯಕರೊಬ್ಬರೂ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಅಂದರೆ ಕುಮಾರಸ್ವಾಮಿಗೆ ಡೆಪ್ಯುಟಿಯಾಗಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಲಿದ್ದಾರೆ. ಆದರೆ ಇದಕ್ಕೆಲ್ಲಾ ಇಂದು ಸ್ಪಷ್ಟ ರೂಪ ಸಿಗಲಿದೆ.
ಕೆಲವು ಮೂಲಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಬಲೇಶ್ವರ ಶಾಸಕ ಎಂಬಿ ಪಾಟೀಲ್ ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಇತರ ಪ್ರಮುಖ ಖಾತೆಗಳಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈಗಾಗಲೇ ಲಾಬಿ ನಡೆಸಲು ಪ್ರಾರಂಭಿಸಿದ್ದಾರೆ. ಆದರೆ ಇದಕ್ಕೆಲ್ಲಾ ಇಂದು ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ. ಜತೆಗೆ ನಾಳೆ ಕುಮಾರಸ್ವಾಮಿ ಜತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದೂ ತಿಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.