Publish Date: Fri, 26 Oct 2018 (13:53 IST)
Updated Date: Fri, 26 Oct 2018 (13:55 IST)
ಜಮಖಂಡಿ : ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಗರಂ ಆಗಿದ್ದಾರೆ.
ಜಮಖಂಡಿ ಉಪಚುನಾವಣೆ ಉಸ್ತುವಾರಿಯಾಗಿ 30 ಕ್ಕು ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಕೆಪಿಸಿಸಿ ನೇಮಿಸಿತ್ತು. ಆದರೆ, ನೇಮಕಗೊಂಡವರ ಪೈಕಿ ಸುಮಾರು 15 ಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಗೈರು ಹಾಜರಾಗಿದ್ದಾರೆ.
ಇದರಿಂದ ಬೇಸರಗೊಂಡ ಕೆ.ಸಿ.ವೇಣುಗೋಪಾಲ್ ಕ್ಷೇತ್ರದ ಉಸ್ತುವಾರಿ ಹೊತ್ತವರೇಕೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ