Publish Date: Tue, 21 Dec 2021 (07:30 IST)
Updated Date: Tue, 21 Dec 2021 (07:23 IST)
ಬೆಳಗಾವಿ : ಕಾಯ್ದೆ ಮಂಡನೆಗೆ ಮುಂದಾದರೆ ಅದರ ಪೀಠಿಕೆಗೆ ನಮ್ಮ ವಿರೋಧ ಇದೆ. ಚರ್ಚೆಯಲ್ಲಿ ಭಾಗವಹಿಸುವುದು ಬೇರೆ ಮಾತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಈ ಎಲ್ಲಾ ವಿಷಯಗಳ ಚರ್ಚೆಗೆ ಸಮಯಾವಕಾಶದ ಕೊರತೆ ಇರುವುದರಿಂದ ಸದನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಣೆ ಮಾಡುವಂತೆ ಪತ್ರ ಬರೆದು ಮನವಿ ಮಾಡಿದ್ದೆ, ಈ ಮನವಿಯನ್ನು ಅವರ ಒಪ್ಪದ ಕಾರಣಕ್ಕೆ, ಎಂಇಎಸ್ ನವರ ಪುಂಡಾಟಿಕೆ, ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಕಾರಣಕ್ಕೆ ನಾವಿಂದು ಸಭಾತ್ಯಾಗ ಮಾಡಿದ್ದೇವೆ.
ಅಧಿವೇಶನದ ಹೊರಗೆ ಈ ಎಲ್ಲಾ ವಿಚಾರಗಳ ಬಗ್ಗೆ ಪ್ರತಿಭಟನೆ ಮುಂದುವರೆಸುತ್ತೇವೆ ಮತ್ತು ಜನತಾ ನ್ಯಾಯಾಲಯಕ್ಕೆ ಇವನ್ನು ತೆಗೆದುಕೊಂಡು ಹೋಗುತ್ತೇವೆ.
ಕಳಂಕ ಹೊತ್ತಿರುವ ವ್ಯಕ್ತಿಯನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಅವರನ್ನು ಉಳಿಸಿಕೊಂಡರೆ ಸರ್ಕಾರ ಮುಂದುವರೆಯಲು ಯಾವುದೇ ನೈತಿಕ ಹಕ್ಕುಗಳು ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Ramya kosira
Publish Date: Tue, 21 Dec 2021 (07:30 IST)
Updated Date: Tue, 21 Dec 2021 (07:23 IST)