ಚೆನ್ನೈ : ಸರ್ಕಾರಿ ನೌಕರಿಗೆ ಸೇರಬೇಕೆಂದರೆ ಇನ್ನುಮುಂದೆ ತಮಿಳು ಭಾಷಾ ವಿಷಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ತಮಿಳು ಜ್ಞಾನ ಇರಬೇಕು, ಜನರಿಗೆ ಮಾತೃಭಾಷೆಯಲ್ಲಿ ಸರ್ಕಾರಿ ಸೇವೆಗಳು ದೊರಕಬೇಕು ಮತ್ತು ತಮಿಳು ಭಾಷಿಕರಿಗೇ ಸ್ಥಳೀಯ ಉದ್ಯೋಗಗಳು ಸಿಗಬೇಕು ಎಂಬ ಉದ್ದೇಶದೊಂದಿಗೆ ತಮಿಳುನಾಡು ಸರ್ಕಾರ ಎಲ್ಲ ಸರ್ಕಾರಿ ನೌಕರರಿಗೆ ತಮಿಳು ಭಾಷೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.