Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯನ್ನು ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಬಿಡುಗಡೆ ಮಾಡಿದೆ.
ಸಮೀಕ್ಷೆಯ ಪಟ್ಟಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಗ್ರ ಸ್ಥಾನದಲ್ಲಿದ್ದಾರೆ.
ಜಾಗತಿಕ ಪಟ್ಟಿಯಲ್ಲಿ ವಿಶ್ವದ 13 ನಾಯಕರು ಸ್ಥಾನ ಪಡೆದಿದ್ದಾರೆ. ಶೇ.71 ರೇಟಿಂಗ್ ಪಡೆದಿರುವ ಪ್ರಧಾನಿ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
2021ರಲ್ಲೂ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರು ಮೊದಲ ಸ್ಥಾನದಲ್ಲಿದ್ದರು. ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ನಾಯಕರು ಸ್ಥಾನ ಪಡೆದುಕೊಂಡಿದ್ದಾರೆ.