ಬೆಂಗಳೂರು : ಬಿಜೆಪಿಗೆ ಮತ ಹಾಕಬೇಡಿ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಅವರು ಕರ್ನಾಟಕದ ತೆಲುಗು ಭಾಷಿಕರಿಗೆ ಮನವಿ ಮಾಡಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಅವರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಅವರು, ತಿರುಪತಿ ತಿಮ್ಮಪ್ಪನ ಮಂದಿರದಲ್ಲಿ ಆಂಧ್ರಪ್ರದೇಶದ ಜನರಿಗೆ ನೀಡಿದ್ದ ಭರವಸೆ ಈಡೇರಿಸದೆ ಜನರಿಗೆ ಮರಳು ಮಾಡಿ ತೆಲುಗು ಜನರಿಗೆ ಮೋದಿಯವರು ಅನ್ಯಾಯ ಮಾಡಿದ್ದಾರೆ. ಕರ್ನಾಟಕದಲ್ಲಿ ಮೋದಿ ಹೇಳಿಕೆಗೆ ಯಾರೂ ಮರುಳಾಗಬೇಡಿ, ವಿಧಾನಸಭೆ ಚುನಾವಣೆಯಲ್ಲಿ ತೆಲುಗು ಭಾಷಿಕರು ಮೋದಿ ಪಕ್ಷಕ್ಕೆ ಮತ ಹಾಕದೇ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ತೆಲುಗು ಜನರ ಪರ ನಿಲ್ಲುವಂತೆ ಕರೆ ನೀಡಿದರು.
ಇದರಿಂದ ಕೋಪಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು,’ ಯಾರೋ ಬಂದು ನಾನ್ ಸೆನ್ಸ್ ರೀತಿ ಮಾತನಾಡುತ್ತಾರೆ. ಬಿಜೆಪಿಗೆ ಮತ ನೀಡಬೇಡಿ ಅನ್ನೋದಕ್ಕೆ ಅವರು ಯಾರು? ಜನರು ಅದಕ್ಕೆ ಬೆಂಬಲ ಸೂಚಿಸುವುದಿಲ್ಲ. ಜನರು ಈಗಾಗಲೇ ಬಿಜೆಪಿಗೆ ಮತ ಹಾಕಲು ತೀರ್ಮಾನಿಸಿದ್ದಾರೆ’ ಎಂದು ತೀರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ